ನಮ್ಮ ದೇಶ ಹಲವು ಸಂಪ್ರದಾಯಗಳು ಹಾಗೂ ಆಚರಣೆಗಳಿಗೆ ಹೆಸರುವಾಸಿಯಾಗಿದೆ. ಇಂತಹ ಆಚರಣೆಗಳು ಹಾಗೂ ಸಂಪ್ರದಾಯಗಳಿಂದ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರಗಳು ಜೀವಂತವಾಗಿ ಉಳಿದುಕೊಂಡಿದೆ. ಅದೇ ಕಾರಣದಿಂದಾಗಿಯೂ ನಮ್ಮ ನಡುವೆ ಸಂಬಂಧಗಳು ಜೀವಂತವಾಗಿದೆ. ಹಿಂದಿನ ಕಾಲದಲ್ಲಿ ಯುದ್ಧಕ್ಕೆ ಹೊರಟ ಯೋಧನಿಗೆ ಹೆಂಡತಿ ಅಥವಾ ತಾಯಿ ವಿಜಯಿಯಾಗಿ ಬರಲೆಂದು ತಿಲಕವಿಟ್ಟು ಯುದ್ಧಭೂಮಿಗೆ ಕಳುಹಿಸುತ್ತಿದ್ದರು.

 

 

ಇದೇ ಪರಂಪರೆ ರಾಖಿ ಕಟ್ಟುವ ಸಂಪ್ರದಾಯವಾಗಿ ಬೆಳೆದು ಬಂದಿತು. ಮನೆಯಲ್ಲಿ ಇರುವ ಹೆಣ್ಣು ಮಕ್ಕಳನ್ನು ಆಕೆಯ ತಮ್ಮ ಅಥವಾ ಅಣ್ಣ ರಕ್ಷಣೆ ಮಾಡುವ ಸಂಕಲ್ಪ ತೊಡುವಂತಹ ಸಂಪ್ರದಾಯ ಈ ರಾಖಿ ಕಟ್ಟುವ ಹಿಂದಿನ ಕಥೆ. ಸಾಮಾನ್ಯವಾಗಿ ಇಂದು ಪ್ರತಿ ಮನೆಯಲ್ಲೂ ಹೀಗೆ ಅಣ್ಣ ಅಥವಾ ತಮ್ಮನಿಗೆ ರಾಖಿ ಕಟ್ಟುವ ಮೂಲಕ ತಮ್ಮ ರಕ್ಷಣೆಯ ಹೊಣೆಯನ್ನು ಆತನಿಗೆ ವಹಿಸಿಕೊಡುವ ಸಂಪ್ರದಾಯ ಬೆಳೆದು ಬಂದಿದೆ.

 

 

ಈ ರಾಖಿ ಕಟ್ಟುವ ಸಂಪ್ರದಾಯ ನಮ್ಮ ಸೆಲೆಬ್ರಿಟಿಗಳು ಕೂಡ ಮಾಡಿಕೊಂಡು ಬರುತ್ತಾರೆ. ಅವರ ಮನೆಯಲ್ಲಿ ಇರುವ ಅಣ್ಣ ಅಥವಾ ತಮ್ಮನಿಗೆ ರಾಖಿ ಕಟ್ಟಿ ಆರತಿ ಬೆಳಗಿ ನೂರು ಕಾಲ ಸುಖವಾಗಿ ಬಾಳುವಂತೆ ಹರಸುತ್ತಾರೆ. ಇಲ್ಲಿ ಬ್ರಾತೃಭಾವನೆಯನ್ನು ಮೂಡಿಸುವ ಕೆಲಸ ಮಾಡಲಾಗುತ್ತದೆ. ಅದೇ ಕಾರಣಕ್ಕಾಗಿ ತಮ್ಮ ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.

 

 

ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಸಂಕಲ್ಪವನ್ನು ಇವರು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದಲೂ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಹಬ್ಬಗಳನ್ನು ಇದೂ ಕೂಡ ಒಂದಾಗಿದೆ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿ ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.

 

 

ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.

 

 

ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ.

 

 

ನಟಿ ಮಾಲಾಶ್ರೀ ಹಾಗೂ ನಿರ್ಮಾಪಕ ಕೋಟಿ ರಾಮು ಅವರ ಮಗಳು ಅನನ್ಯ ಅವರು ತಮ್ಮ ತಮ್ಮಂದಿರಿಗೆ ರಾಖಿ ಕಟ್ಟಿ ಸಂಭ್ರಮ ಪಟ್ಟರು. ಹೀಗೆ ಹಲವಾರು ಸೆಲೆಬ್ರಿಟಿಗಳು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮ ಪಡುತ್ತಾರೆ.

Leave a comment

Your email address will not be published.