ಮಂಗಳೂರಿನಲ್ಲಿ ಸಮಾವೇಶ ಆಯೋಜನೆಗೊಂಡಿರುವ‌ನಗರದ ಗೋಲ್ಡ್ ಫಿಂಚ್ ಮೈದಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆ ಜನರು ಕರತಾಡನದ ಮೂಲಕ ಸ್ವಾಗತಿಸಿದರು. ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮೋದಿ ಅವರಿಗೆ ಹಾರ, ಪೇಟ ತೊಡಿಸಿ ಸ್ವಾಗತಿಸಿದರು.‌ ಉಡುಪಿ ಶ್ರೀಕೃಷ್ಣ ನ ಮೂರ್ತಿ ನೀಡಿದರು.

 

 

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪರಶುರಾಮನ ಮೂರ್ತಿ ನೀಡಿದರು. ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.

 

 

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೆ ಮಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಾದಾರಗಳಿಂದ ಬರ ಮಾಡಿಕೊಳ್ಳಲಾಯ್ತು. ವೇದಿಕೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಸಚಿವ ಸರ್ಬಾನಂದ ಸೋನಾವಾಲ್‌ ಅವರು ಮಡಿಕೇರಿ ಪೇಟ, ಹಾರ ಹಾಕಿ, ಶ್ರೀ ಕೃಷ್ಣನ ಪ್ರತಿಮೆ ನೀಡಿ ಸ್ವಾಗತ ಕೋರಿದರು. ಬಳಿಕ ರಾಜ್ಯ ಸರ್ಕಾರದ ಪರವಾಗಿ ಮಂಗಳೂರು ಮಲ್ಲಿಗೆಯಿಂದ ಮಾಡಿದ ಹಾರ ಹಾಗೂ ಪರಶುರಾಮನ ಮೂರ್ತಿ ನೀಡಿ ಪ್ರಧಾನಿ ಮೋದಿ ಅವರಿಗೆ ಸ್ವಾಗತ ಕೋರಲಾಯ್ತು.

 

 

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಬಂದೋ ಬಸ್ತ್ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬರುವವರು ಲೈಟರ್, ಮ್ಯಾಚ್ಬಾಕ್ಸ್, ಭಿತ್ತಿಪತ್ರ, ಬಾಟಲಿ, ಕಪ್ಪು ಬಟ್ಟೆ ತರಬಾರದು ಎಂದು ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದರು. ಈಗಾಗಲೇ ಸಮಾವೇಶಕ್ಕೆ ಸಾಕಷ್ಟು ಜನರ ಆಗಮನವಾಗಿದ್ದು ಕಪ್ಪು ಅಂಗಿ ಧರಿಸಿ ಬಂದವರನ್ನು ಪ್ರವೇಶ ದ್ವಾರದಲ್ಲೇ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ.

 

 

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಿಜೆಪಿ ನಾಯಕರು ಹಾಕಿದ್ದ ಮಲ್ಲಿಗೆ ಹಾರ, ಶಾಲನ್ನು ತೆಗೆದು ಎಸೆದಿದ್ದಾರೆ. ಇದಕ್ಕೆ ಕಾರಣ ತಿಳಿದು ಬಂದಿಲ್ಲ.

 

Leave a comment

Your email address will not be published.