Categories: Social

ಮುರುಘಾಶ್ರೀ ಗಳಿಂದ ಎಷ್ಟೋ ಹೆಣ್ಣುಮಕ್ಕಳ ಅಬಾರ್ಷನ್ ಆಗಿದೆಯಂತೆ.. ಇವರ ಹಿಂಸೆ ತಾಳಲಾರದೆ ಎಷ್ಟೋ ಮಂದಿ ಹೆಣ್ಣುಮಕ್ಕಳು ಮಠ ಬಿಟ್ಟು ಓಡಿ ಹೋಗಿದ್ದಾರಂತೆ..!!!

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸ್ಥಳೀಯ ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಕೋರ್ಟ್ ನಲ್ಲಿ ವಿಚಾರಣೆ ವೇಳೆ ಪೊಲೀಸರು ಶ್ರೀಗಳನ್ನು ಐದು ದಿನಗಳ ಕಾಲ ವಿಚಾರಣೆಗೆ ನೀಡುವಂತೆ ಕೇಳಿದ್ದರು. ಆದರೆ ನ್ಯಾಯಾಲಯ ನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡಿದೆ.

 

 

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಿಂದ ಇಂದು ಅವರನ್ನು ಗಾಲಿಕುರ್ಚಿಯಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ತೀವ್ರ ಆರೋಗ್ಯ ಸಮಸ್ಯೆಯಿಂದ ಇಂದು ಬೆಳಗ್ಗೆ ಜೈಲಿನಿಂದ ಮುರುಘಾಶ್ರೀಯನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

 

 

ಶ್ರೀಗಳನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ ಬಗ್ಗೆ ಮಾಹಿತಿ ನೀಡದ ಪೊಲೀಸರನ್ನು ನ್ಯಾಯಾಲಯ ಟೀಕಿಸಿದೆ. ವೈದ್ಯಕೀಯ ವರದಿಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಪೊಲೀಸರು ತಮ್ಮ ವಶದಲ್ಲಿರುವ ಮುರುಘಾ ಶರಣರ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅವರ ಆರೋಗ್ಯ ಸ್ಥಿತಿ ಹದಗೆಟ್ಟರೆ ಮಾತ್ರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ನ್ಯಾಯಾಲಯ ಹೇಳಿದೆ.

 

 

64 ವರ್ಷದ ಶಿವಮೂರ್ತಿ ಮುರುಘಾ ಶರಣರು ಲಿಂಗಾಯತ ಸ್ವಾಮೀಜಿಗಳಲ್ಲಿ ಪ್ರಮುಖರಾಗಿದ್ದು ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆರು ದಿನಗಳ ಹಿಂದೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

 

 

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಶ್ರೀಗಳ ವಿರುದ್ಧ ಕೇಸ್ ದಾಖಲಾಗಿದೆ. ಮತ್ತು ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಬಾಲಕಿಯರ ಪೈಕಿ ಓರ್ವರು ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಶ್ರೀಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ರಕ್ಷಿಸುವ ಕಾನೂನಿನ ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.

 

 

ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಾದ್ಯಂತ ನಾಗರಿಕ ಸಮಾಜ ಮತ್ತು ಸಾಮಾಜಿಕ ಸಂಘಟನೆಗಳ ಅಹೋರಾತ್ರಿ ಪ್ರತಿಭಟನೆಯ ನಂತರ ಗುರುವಾರ ರಾತ್ರಿ 10.15 ರ ಸುಮಾರಿಗೆ ಮುರುಘಾ ಶರಣರನ್ನ ಬಂಧಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳ ದೃಷ್ಟಿಯಿಂದ ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದರು. ಬಂಧನಕ್ಕೆ ಗಂಟೆಗಳ ಮೊದಲು ಮಠದ ಮುಂಭಾಗದ ಬಾಗಿಲ ಬಳಿ ಬ್ಯಾರಿಕೇಡ್ ಹಾಕಿ ಹಿಂಬಾಗಿಲಿನಿಂದ ಹೊರಕ್ಕೆ ಕರೆದೊಯ್ದರು.

 

 

ಮುರುಘಾ ಮಠದ ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನ ಸರ್ಕಾರೇತರ ಸಂಸ್ಥೆಯನ್ನು ಸಂಪರ್ಕಿಸಿದ ನಂತರ ಆಗಸ್ಟ್ 26 ರಂದು ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಬಾಲಕಿಯರು ತಮ್ಮ ಮೇಲೆ ಶ್ರೀಗಳು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿದ್ದಾರೆ.

 

 

ಶ್ರೀಗಳ ವಿರುದ್ಧದ ಆರೋಪಗಳ ತನಿಖೆಯನ್ನು ನಿಷ್ಪಕ್ಷಪಾತ, ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಸುತ್ತಿಲ್ಲ ಎಂದು ಆರೋಪಿಸಿ ವಕೀಲರ ಗುಂಪು ಗುರುವಾರ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದಿದೆ. ಇದೀಗ ಆಡಿಯೋ ಒಂದು ವೈರಲ್ ಆಗಿದ್ದು ಮುರುಘಾ ಶರಣರು ಈ ಹಿಂದೆಯೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರಂತೆ. ಅನೇಕ ಮಂದಿ ಗರ್ಭಿಣಿಯರಾಗಿದ್ದರಂತೆ ಮುರುಘಾ ಶರಣರು ಅವರಿಗೆ ಅಬಾರ್ಶನ್ ಕೂಡ ಮಾಡಿಸಿದ್ದರಂತೆ. ಅನೇಕ ಹೆಣ್ಣು ಮಕ್ಕಳು ಇವರ ಕಾಟ ತಾಳಲಾರದೆ ಮಠ ಬಿಟ್ಟು ಹೋಗಿದ್ದಾರಂತೆ.

 

 

ಪೊಲೀಸರು ಶಿವಮೂರ್ತಿ ಸ್ವಾಮೀಜಿ ಅವರ ಬೆಡ್​​ರೂಂ, ಬಾತ್​ರೂಂ, ಕೊಠಡಿ ಮಹಜರು ಮಾಡಲಾಗಿತ್ತು. ಸಂತ್ರಸ್ತ ಬಾಲಕಿಯರು ತಮ್ಮ ಹೇಳಿಕೆಯಲ್ಲಿ ನೀಡಲಾದ ಎಲ್ಲಾ ಸ್ಥಳಗಳ ಪರಿಶೀಲನೆ ನಡೆಸಿದರು. ಕೃತ್ಯಕ್ಕೆ ಸಂಬಂಧಿಸಿದ ಕೆಲ ಸಾಕ್ಷ್ಯಗಳ ಸಂಗ್ರಹ ಮಾಡಿರುವ ಮಾಹಿತಿ ಲಭ್ಯವಾಗಿತ್ತು. ಮಠದ ಸಿಬ್ಬಂದಿಯಿಂದ ಕೆಲ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ.

 

 

ಚಿತ್ರದುರ್ಗ ಮಠದ ಎರಡು ಹಾಸ್ಟೆಲ್​ಗಳಲ್ಲಿದ್ದ 37 ಬಾಲಕಿಯರನ್ನು ಸಮೀಪದ ಸರ್ಕಾರಿ ವಸತಿ ಶಾಲೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಮಠದಿಂದ ಬಸವ ಮತ್ತು ಅಕ್ಕಮಹಾದೇವಿ ಹೆಸರಿನಲ್ಲಿ ಎರಡು ಹಾಸ್ಟೆಲ್​ ಗಳನ್ನು ನಡೆಸಲಾಗುತ್ತಿದೆ. ಪ್ರಕರಣದ ಬೆನ್ನಲ್ಲೇ ಚಿತ್ರದುರ್ಗದ ಜಿಲ್ಲೆಯ ಸರ್ಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ಥಳಾಂತರಿಸಲಾಗಿತ್ತು. ವಸತಿ ನಿಲಯದಲ್ಲಿರುವ ಮಕ್ಕಳು ಭಯದ ವಾತಾವರಣದಲ್ಲಿದ್ದರು.

 

 

ಇತ್ತ ಪೋಷಕರು ಸಹ ಆತಂಕದಲ್ಲಿರುವ ಕಾರಣ ಮಕ್ಕಳನ್ನು ಸಮೀಪದ ಸರ್ಕಾರಿ ವಸತಿ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಸ್ಥಳಾಂತರಗೊಂಡಿರುವ 38 ಮಕ್ಕಳ ಪೈಕಿ 10 ಮಂದಿ ಅನಾಥರಾಗಿದ್ದು, ಒಬ್ಬರಿಗೆ ತಾಯಿ ಮಾತ್ರ ಇದ್ದಾರೆ. ಹೊಸ ವಾತಾವಾರಣದಲ್ಲಿ ಮಕ್ಕಳು ಹೇಗೆ ಇರುತ್ತಾರೆ ಅನ್ನೋದು ಸಹ ಪೋಷಕರಿಗೆ ಚಿಂತೆಯಾಗಿದೆ.

 

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

5 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

5 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

6 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

6 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

19 hours ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

23 hours ago