Categories: Entertainment

ಈ ಸಿನಿಮಾನ ಒಪ್ಪಿಕೊಂಡಿರೋದು ರಾಯನ್ ಗೊಸ್ಕರ..!!!

ಬಹುಭಾಷಾ ನಟಿ ಮೇಘನಾ ರಾಜ್ ಹಲವು ವರ್ಷಗಳ ಬಳಿಕ ಮತ್ತೆ ಕನ್ನಡ ಚಿತ್ರರಂಗಕ್ಕೆ ಕಮ್‍ಬ್ಯಾಕ್ ಮಾಡುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಮೇಘನಾ ಗೆಳೆಯ ಪನ್ನಗ ಭರಣ ನಿರ್ಮಾಣ ಮಾಡುತ್ತಿರುವ ಇನ್ನೂ ಹೆಸರಿಡದ ಚಿತ್ರಕ್ಕೆ ಅವರು ನಾಯಕಿಯಾಗಿದ್ದು, ಇದರ ಜತೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸಿಂಗ್ ಚಾಂಪಿಯನ್‌’ನಲ್ಲಿ ಮೇಘನಾ ರಾಜ್‌ ತೀರ್ಪುಗಾರ್ತಿಯಾಗಿ ಕಾಣಿಸಿಕೊಳ್ಳುವ ಮೂಲಕ ಮನೆ ಮಾತಾಗಿದ್ದಾರೆ. ಈ ಮಧ್ಯೆ ಮತ್ತೊಂದು ಸಿನಿಮಾದಲ್ಲಿ ಮೇಘನಾ ರಾಜ್ ನಟಿಸುತ್ತಿರುವುದಾಗಿ ತಿಳಿಸುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

 

 

ಈ ಬಗ್ಗೆ ಮೇಘನಾ ರಾಜ್ ಸಿನಿಮಾದ ಹೆಸರು ಹಾಗೂ ಅದಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನೌನ್ಸ್ ಮಾಡಿದ್ದಾರೆ. ಈ ಹಿಂದೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾದಲ್ಲಿ ಅಭಿನಯಿಸಿದ್ದ ಮೇಘನಾ ರಾಜ್ ಇದೀಗ ಅದೇ ಚಿತ್ರತಂಡದೊಂದಿಗೆ ‘ಶಬ್ಧ’ ಎಂಬ ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ತಮ್ಮ ಇನ್‍ಸ್ಟಾಗ್ರಾಮ್‍ ಖಾತೆಯಲ್ಲಿ ತಿಳಿಸಿದ್ದಾರೆ. ಸದ್ಯ ಈ ವಿಚಾರವಾಗಿ ಮೇಘನಾ ರಾಜ್ ಫೋಟೋವೊಂದನ್ನು ಹಂಚಿಕೊಂಡಿದ್ದು, ಈ ಹಿಂದೆ ನಟಿಸಿದ್ದ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ತಂಡದೊಂದಿಗೆ ನನ್ನ ಮುಂದಿನ ಸಿನಿಮಾ ‘ಶಬ್ಧ’ ಎಂದು ಅನೌನ್ಸ್ ಮಾಡುತ್ತಿದ್ದೇನೆ.

 

 

ಈ ಚಿತ್ರಕ್ಕಾಗಿ ನನಗೆ ರಾಜ್ಯ ಪ್ರಶಸ್ತಿ ಸಿಕ್ಕಿದೆ. ಹೀಗಾಗಿ ಈ ಚಿತ್ರತಂಡದ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಕಾಂತ ಕನ್ನಳ್ಳಿ ಅವರೊಂದಿಗೆ 2ನೇ ಬಾರಿ ಕೆಲಸ ಮಾಡುತ್ತಿರುವುದು ನನಗೆ ವರದಾನವಾಗಿದ್ದು, ಶೀಘ್ರದಲ್ಲೇ ಮುಂದಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ. ನಿಮ್ಮ ಬೆಂಬಲ ಮತ್ತು ಪ್ರಾರ್ಥನೆಗಳಿಗಾಗಿ ಮತ್ತೊಮ್ಮೆ ಎಲ್ಲರಿಗೂ ಧನ್ಯವಾದಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಮೇಘನಾ ಬಳಿ ಒಂದೊಂದೇ ಸಿನಿಮಾಗಳು ಹುಡುಕಿಕೊಂಡು ಬರುತ್ತಿದ್ದು, ಆದಷ್ಟು ಬೇಗ ಬೆಳ್ಳಿತೆರೆ ಮೇಲೆ ಮೇಘನಾ ಅಭಿಮಾನಿಗಳ ಮುಂದೆ ದರ್ಶನ ಕೊಡಲಿದ್ದಾರೆ.

 

 

ಮೇಘನಾ ರಾಜ್ ಮುದ್ದು ಮಗ ರಾಯನ್ ರಾಯ್ ಸರ್ಜಾನ (Rayan Raj Sarja) ಆರೈಕೆಯಲ್ಲಿ ದಿನಕಳೆಯುತ್ತಿದ್ದು, ಮುದ್ದು ಮಗನ ಆಟ, ತುಂಟಾಟ ನೋಡುತ್ತಾ ಅಭಿಮಾನಿಗಳೊಂದಿಗೂ ಇದನ್ನು ಶೇರ್ ಮಾಡುತ್ತಿರುತ್ತಾರೆ. ಅಪ್ಪನ ತರನೇ ತುಂಬಾ ತರ್ಲೆ ಮಾಡ್ತಾನಂತೆ ರಾಯನ್ ರಾಯ್ ಸರ್ಜಾ. ಯಾವಾಗಲೂ ಅಮ್ಮ ಅನ್ನು ಅಮ್ಮ ಅನ್ನು ಎಂದರೆ ಪುಟ್ಟ ಕಂದ ಅಪ್ಪ ಅಪ್ಪ ಎನ್ನುತ್ತಾನೆ ಎಂದಿದ್ದಾರೆ ನಟಿ. ಚಿರು ಬಗ್ಗೆ ಆಲೋಚಿಸಿದಾಗ ಅಲ್ಲಿ ಅವನಲ್ಲಿ ಯಾವಾಗಲೂ ನಗು ಇತ್ತು. ಇವತ್ತು ಎಲ್ಲರೂ ಚಿರುನನ್ನು ನೆನಪಿಸಿಕೊಳ್ಳುವಾಗ ಅವನ ನಗುವನ್ನೇ ನೆನಪಿಸಿಕೊಳ್ಳುತ್ತಾರೆ. ಈ ಚಿತ್ರವನ್ನು ಒಪ್ಪಿಕೊಳ್ಳಲು ಬಹುಮುಖ್ಯ ಕಾರಣ ಮಗ ರಾಯನ್ ರಾಜ್ ಸರ್ಜಾ ಎಂದಿದ್ದಾರೆ ಮೇಘನಾ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

10 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

10 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

11 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

11 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

1 day ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

1 day ago