Categories: Social

ಸಾರಿಗೆ ಬಸ್ ಅಪಘಾತ. ಸಾವಿನಲ್ಲೂ ಸಾರ್ಥಕತೆ ಮೆರೆದ ಕಾಫಿನಾಡಿನ ಯುವತಿ..!!!

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ಬಲಿಯಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿರುವಂತಹ ಘಟನೆ ನಡೆದಿದೆ. ತಾಲೂಕಿನ ಸೋಮನಹಳ್ಳಿ ತಾಂಡ್ಯದ ರಕ್ಷಿತಾ ಮೃತ ಯುವತಿ. ಬಸ್​ನಿಂದ ಕೆಳಗೆ ಬಿದ್ದು ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಚಿಕ್ಕಮಗಳೂರಿನ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದಳು. ಮಗಳ ಅಂಗಾಂಗ ದಾನಕ್ಕೆ ಪೋಷಕರಾದ ತಾಯಿ ಲಕ್ಷ್ಮಿ ಬಾಯಿ, ತಂದೆ ಸುರೇಶ್ ನಾಯಕ್​ ಒಪ್ಪಿಗೆ ನೀಡಿದ್ದಾರೆ.

 

 

ಸದ್ಯ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿರುವ ರಕ್ಷಿತಾ ನಾಯಕ್ ಮೃತ ದೇಹವಿದ್ದು, ಇಂದು ಸಂಜೆ ತಜ್ಞರ ತಂಡ ಚಿಕ್ಕಮಗಳೂರಿಗೆ ಆಗಮಿಸಲಿದೆ. ನಾಳೆ ಮಧ್ಯಾಹ್ನದ ಹೊತ್ತಿಗೆ 2 ಹೆಲಿಕ್ಯಾಪ್ಟರ್​ನಲ್ಲಿ ಅಂಗಾಂಗ ರವಾನೆ ಮಾಡಲಿದ್ದು, ಇದೇ ಮೊದಲ ಬಾರಿಗೆ ಅಪರೂಪದ ಪ್ರಕರಣಕ್ಕೆ ಕಾಫಿನಾಡು ಚಿಕ್ಕಮಗಳೂರು ಸಾಕ್ಷಿಯಾಗಲಿದೆ. ಬಸ್ ನಿಂದ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಬಾಲಕಿಯ ಅಂಗಾಗ ದಾನಕ್ಕೆ ಪೋಷಕರು ಮುಂದಾಗಿದ್ದು,ಮಗಳ ಸಾವಿನ ದುಃಖದಲ್ಲೂ ಮಾದರಿಯಾಗಿದ್ದಾರೆ.

 

 

ಕಡೂರು ತಾಲೂಕಿನ ಸೋಮನಹಳ್ಳಿಯ ನಿವಾಸಿ ರಕ್ಷಿತಾ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ಹೋಗುವಾಗ
ಬಸ್​ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ರಕ್ಷಿತಾಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರ ವೈದ್ಯರು ಪರೀಕ್ಷೆ ನಡೆಸಿ‌ ಯುವತಿಯ ಮೆದುಲು ನಿಷ್ಕ್ರಿಯಗೊಂಡ ಬಗ್ಗೆ ಮಾಹಿತಿ ನೀಡಿದ್ದಾರೆ.ಇದರಿಂದಾಗಿ ಮಗಳ ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ ಮಾಡಿದ್ದಾರೆ.

 

 

ನಮ್ಮ ಮಗಳನ್ನು ನಾವು ಕೂಲಿ ಕೆಲಸ ಮಾಡಿಕೊಂಡು ಓದಿಸುತ್ತಿದ್ದೇವೆ. ಭಾನುವಾರ ನಾನು -ನನ್ನ ಗಂಡ ಕೂಲಿ ಕೆಲಸಕ್ಕೆ ತೆರಳಿದ್ದಾಗ ನಮಗೆ ಫೋನ್​ ಬಂತು.ನಾವು ಆಸ್ಪತ್ರೆಗೆ ಬಂದು ನೋಡಿದಾಗ ಮಗುವಿಗೆ ಈ ರೀತಿ ಆಗಿತ್ತು.ಮಗಳು ಮಾತನಾಡುತ್ತಿರಲಿಲ್ಲ.‌ನಮ್ಮ ಮಗಳು ಎಲ್ಲಾದರೂ ಇನ್ನೂ ಬದುಕಿರಲಿ‌ ಎಂದು‌‌ ಅಂಗಾಂಗ ದಾನ ಮಾಡಿದ್ದೇವೆ ಎಂದು ಪೋಷಕರು ಹೇಳಿದ್ದಾರೆ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

17 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

17 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

18 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

18 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

1 day ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

1 day ago