ಪಂಚಾಂನನ ಫಿಲಂಸ್ ನಿರ್ಮಾಣದ ,ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ “ರಿಪ್ಪನ್ ಸ್ವಾಮಿ ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು ಚಿತ್ರತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.ಪೋಸ್ಟರ್ನಲ್ಲಿ ಚಿನ್ನಾರಿ ಮುತ್ತ ರಾ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಮಾಲ್ಗುಡಿ ಡೇಸ್ ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ “ರಿಪ್ಪೆನ್ ಸ್ವಾಮಿ “ಮೂಲಕ ಒಂದು ಮಾಸ್ ಕಥೆ ಹೇಳಲು ಹೊರಟಿದ್ದಾರೆ.ತಾರಾ ಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿ ನಾಡು ,ವಜ್ರದೀರ್ ಜೈನ್ ,ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಮುಂತಾದವರು ಇದ್ದಾರೆ.

ಇನ್ನು ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ ಕಳಸ ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಇನ್ನು ಈ ಸಿನಿಮಾ ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾನ ಮನಸ್ಕರು ಕೈಜೋಡಿಸಿ ನಿರ್ಮಾಣ ಮಾಡುತ್ತಿದ್ದಾರೆ .ಪಂಚಾನನ ಫಿಲಂಸ್ ನ ಮೊದಲನೇ ಸಿನಿಮಾ ಇದಾಗಿದೆ .ತನ್ನ ಎಲ್ಲಾ ಕೆಲಸವನ್ನು ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಚಿತ್ರ ಇದ್ದು ಅತಿ ಶೀಘ್ರದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ

Leave a Reply

Your email address will not be published. Required fields are marked *