ಗ್ರೂಪ್ ಡಿ ಹಾಗೂ ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Karnataka Focus

Becil recruitment 2024 – ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  62
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಡೇಟಾ ಎಂಟ್ರಿ ಆಪರೇಟರ್‌ಗಳು – 15
MTS (ಗ್ರೂಪ್ ಡಿ) – 03
ಮುಖ್ಯಸ್ಥರು, ಐಟಿ – 01
ಹಿರಿಯ ಸಲಹೆಗಾರ (ಹಾರ್ಡ್‌ವೇರ್) – 01
ಹಿರಿಯ ಸಲಹೆಗಾರ (ಸಾಫ್ಟ್‌ವೇರ್) – 01
ಸಿಸ್ಟಮ್ ವಿಶ್ಲೇಷಕ (ಹಾರ್ಡ್‌ವೇರ್) – 01
ಸಿಸ್ಟಮ್ ವಿಶ್ಲೇಷಕ (ಸಾಫ್ಟ್‌ವೇರ್) – 01
ಕ್ಲಿನಿಕಲ್ ಇನ್ಫರ್ಮ್ಯಾಟಿಕ್ಸ್ ಸ್ಪೆಷಲಿಸ್ಟ್ – 02
ಡೆಸ್ಕ್‌ಟಾಪ್ ಬೆಂಬಲ ಇಂಜಿನಿಯರ್ -01
ಅಸೆಟ್ ಕಮ್ ವೆಂಡರ್ ಕೋಆರ್ಡಿನೇಟರ್ – 01
IT ಸಹಾಯವಾಣಿ ಸಂಯೋಜಕರು – 01
ಪ್ರೋಗ್ರಾಮರ್ -01
ಡೇಟಾಬೇಸ್ ನಿರ್ವಹಣೆ – 01
ಡೇಟಾ ವಿಶ್ಲೇಷಕ -01
ವೆಬ್ ಡಿಸೈನರ್ – 01
ಕಂಪ್ಯೂಟರ್ ಹಾರ್ಡ್‌ವೇರ್ ರಿಪೇರಿ/ ನಿರ್ವಹಣೆ ಮತ್ತು ನೆಟ್‌ವರ್ಕಿಂಗ್ ಸಹಾಯಕ – 01
ರೋಗಿಗಳ ಆರೈಕೆ ವ್ಯವಸ್ಥಾಪಕರು (PCM) – 07
ರೋಗಿಗಳ ಆರೈಕೆ ಸಂಯೋಜಕರು (PCC) – 22

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಎಂಇ / ಬಿಟೆಕ್ / ಎಂಎಸ್ಸಿ / ಎಂಟೆಕ್/ ಎಂಇ ಕಂಪ್ಯೂಟರ್ ಸೈನ್ಸ್  ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು .70,000/- ರೂ ಗಳಿಂದ 2,00,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ /ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.885/-
ಎಸ್ಸಿ/ಎಸ್ಟಿ /ಇ ಡಬ್ಲ್ಯೂ ಎಸ್ /ಅಂಗವಿಕಲ ಅಭ್ಯರ್ಥಿಗಳು: ರೂ.531/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 2 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 7 ಫೆಬ್ರುವರಿ 2024
ಪ್ರಮುಖ ಲಿಂಕುಗಳು 

Leave a Comment