ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಫಿಟ್ನೆಸ್ಗೆ ಮತ್ತೊಂದು ಹೆಸರಂತಿದ್ದರು. ಎಷ್ಟೇ ಬ್ಯುಸಿ ಆಗಿದ್ದರೂ ಅವರು ವರ್ಕೌಟ್ ಮಾತ್ರ ಮಿಸ್ ಮಾಡುತ್ತಿರಲಿಲ್ಲ. ಪುನೀತ್ ಅವರ ಅನೇಕ ಸಾಹಸ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದನ್ನು ನಾವೆಲ್ಲ ನೋಡಿದ್ದೇವೆ. ಅಪ್ಪು ಅವರಿಂದ ಸ್ಫೂರ್ತಿ ಪಡೆದು ಅದೆಷ್ಟೋ ಜನ ಫಿಟ್ನೆಸ್ ಕಾಯ್ದುಕೊಂಡಿದ್ದೂ ಇದೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ವರ್ಕೌಟ್ ಮಾಡುವ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ.
ಪುನೀತ್ ರಾಜ್ಕುಮಾರ್ ನಿಧನ ಬಳಿಕ ಪಿಆರ್ಕೆ ಸಂಸ್ಥೆಯ ಸಂಪೂರ್ಣ ಜವಾಬ್ದಾರಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಹೊತ್ತಿದ್ದಾರೆ. ಮಕ್ಕಳ ಜೊತೆಗೆ ಅನೇಕ ಜವಾಬ್ದಾರಿ ಅಶ್ವಿನಿ ಹೆಗಲ ಮೇಲಿದೆ. ಇದೀಗ ಅಶ್ವಿನಿ ಫಿಟ್ ಆಗಲು ವರ್ಕೌಟ್ ಪ್ರಾರಂಭಿಸಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಅಶ್ವಿನಿ ಪುನೀತ್ ರಾಜ್ಕುಮಾರ್, ಅನೇಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ತಿದ್ದಾರೆ. ಅಷ್ಟೇ ಅಲ್ಲದೇ ಹೊಸ ಸಿನಿಮಾಗೆ ಬೆಂಬಲ ಸೂಚಿಸುವ ಮೂಲಕ ಚಿತ್ರರಂಗದಲ್ಲೂ ಸಕ್ರಿಯರಾಗಿದ್ದಾರೆ. ಅಪ್ಪು ಅಭಿಮಾನಿಗಳು ಆಯೋಜಿಸಿ ಕಾರ್ಯಕ್ರಮಗಳಿಗೂ ಭೇಟಿ ನೀಡಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಜಿಮ್ನಲ್ಲಿ ವರ್ಕೌಟ್ ಮಾಡ್ತಿರುವ ವಿಡಿಯೋ ನೋಡಿದ ನೆಟ್ಟಿಗರು ಅಶ್ವಿನಿ ಪ್ರೋತ್ಸಾಹ ನೀಡಿದ್ದಾರೆ. ಮತ್ತೆ ಕೆಲವರು ಒತ್ತಡದಿಂದ ಆಚೆ ಬರಲು ಇದು ಒಳ್ಳೆ ಮಾರ್ಗ ಅಂತ ಸಲಹೆಯನ್ನೂ ನೀಡಿದ್ದಾರೆ. ಅಪ್ಪು ಅವರಂತೆ ವರ್ಕೌಟ್ಗೆ ಇಳಿದಿದ್ದಾರೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ಜಿಮ್ನಲ್ಲಿ ವರ್ಕೌಟ್ ಮಾಡುವ ಶೈಲಿ ಕಂಡು ಪುನೀತ್ ಫ್ಯಾನ್ಸ್ ತಮ್ಮ ಅಪ್ಪು ಅವರನ್ನು ನೆನೆಸಿಕೊಂಡಿದ್ದಾರೆ. ಅಲ್ಲದೇ ನೆಟ್ಟಿಗರು ಅಶ್ವಿನಿ ಅವರಿಗೆ ಪ್ರೋತ್ಸಾಹ ನೀಡಿದ್ದಾರೆ. ಮತ್ತೆ ಕೆಲವರು ತಮ್ಮ ನೆಚ್ಚಿನ ನಟ ಪುನೀತ್ ಅವರನ್ನು ನೆನೆದು ಭಾವುಕರಾಗಿದ್ದಾರೆ.