China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾದ ಹೊಟಾನ್ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದೆ. ಹೋಟಾನ್ ಪಶ್ಚಿಮ ಚೀನಾದ ಸ್ವಾಯತ್ತ ಪ್ರದೇಶವಾದ ನೈಋತ್ಯ ಕ್ಸಿನ್‌ಜಿಯಾಂಗ್‌ನಲ್ಲಿರುವ ಪ್ರಮುಖ ಓಯಸಿಸ್ ಪಟ್ಟಣವಾಗಿದೆ.
ಬುಧವಾರ ಬೆಳಗ್ಗೆ ಚೀನಾದ ಹೊಟಾನ್‌ನಿಂದ 263 ಕಿ.ಮೀ ದೂರದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ.
11 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಮಾಹಿತಿ ನೀಡಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ.
ಫೆಬ್ರವರಿ 23 ರಂದು ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಸಾವುನೋವುಗಳು ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.