ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಅಂದು ದೆಹಲಿಯಿಂದ ನೇರವಾಗಿ ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಬಂದಿಳಿಯಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಡಿಸಿಜಿಎ ಇಂದು ವಿಮಾನ ನಿಲ್ದಾಣದ ರನ್‌ವೇ ಪರೀಕ್ಷೆ ನಡೆಸಿದೆ. ಇದಕ್ಕಾಗಿ ಮೊದಲ ಬಾರಿಗೆ ಭಾರತೀಯ ವಾಯುಪಡೆಯ ವಿಮಾನವೊಂದು ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ದೆಹಲಿಯಿಂದಾ ಬೆಳಿಗ್ಗೆ 11.45ಕ್ಕೆ ಹೊರಟ 180 ಪ್ರಯಾಣಿಕರ ಸಾಮರ್ಥ್ಯದ ಈ ವಿಮಾನ, ಮಧ್ಯಾನ 2.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಿತು.ಈ ಕುರಿತು ಟ್ವಿಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ, ʼಶಿವಮೊಗ್ಗಾ ಜಿಲ್ಲೆಯ ಜನತೆಯ ಹಲವು ವರ್ಷಗಳ ಕನಸು ನನಸಾಗಿದೆ.ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿಯಿತು.ಇದು ಡಬಲ ಎಂಜಿನ್ ಸರ್ಕಾರದಿಂದ ಸಂಪರ್ಕ ಕ್ರಾಂತಿಯಾಗಿದೆʼ ಎಂದು ಬರೆದುಕೊಂಡಿದೆ.
ಮೊದಲು ಇಳಿದ ವಿಮಾನಕ್ಕೆ ಸಂಪ್ರದಾಯದಂತೆ ಎರಡು ಅಗ್ನಿಶಾಮಕ ವಾಹನಗಳ ಮೂಲಕ ನೀರು ಎರಚಿ ವಾಟರ್ ಕೆನನ್ ಗೌರವ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ವಿಥುನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.