ಕಾರು ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾಗಿ ಸದ್ಯ ಚೇತರಿಸಿಕೊಂಡಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ವಾಕಿಂಗ್ ಆರಂಭಿಸಿದ್ದಾರೆ. ಈ ಬಗ್ಗೆ ಸ್ವತಃ ರಿಷಬ್ ಪಂತ್ ಚಿತ್ರವನ್ನು ಹಂಚಿಕೊಂಡಿದ್ದು, ಸ್ಪೂರ್ತಿದಾಯಕ ಸಂದೇಶವನ್ನು ಬರೆದಿದ್ದಾರೆ.
ಪಂತ್ ತಮ್ಮ ಅಭಿಮಾನಿಗಳಿಗೆ ‘ಒಂದು ಹೆಜ್ಜೆ ಮುಂದೆ, ಒಂದು ಹೆಜ್ಜೆ ದೃಢವಾಗಿ, ಚೇತರಿಕೆಯತ್ತ ಒಂದು ಹೆಜ್ಜೆ’ ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 30, 2022 ರಂದು, ಪಂತ್ ತನ್ನ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಹೊಸ ವರ್ಷಕ್ಕಾಗಿ ರೂರ್ಕಿಯಲ್ಲಿರುವ ತನ್ನ ಮನೆಗೆ ಪ್ರಯಾಣಿಸುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
View this post on Instagram
ಪಂತ್ ಅವರ ತಲೆ, ಬೆನ್ನು, ಮೊಣಕಾಲು ಮತ್ತು ಕಾಲಿಗೆ ಗಾಯಗಳಾಗಿವೆ. ಬಲ ಮೊಣಕಾಲಿನ ಅಸ್ಥಿರಜ್ಜು ಗಾಯದಿಂದ ಚೇತರಿಸಿಕೊಳ್ಳಲು ಹಲವಾರು ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ.