National Women’s Day 2023: ನಮ್ಮ ಸಂವಿಧಾನದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನರು. ಇಬ್ಬರಿಗೂ ಸಮಾನ ಹಕ್ಕು ನೀಡಲಾಗಿದೆ. ಮಹಿಳೆಯರು ಪುರುಷರಷ್ಟೇ ಸಮರ್ಥರು. ಮಹಿಳೆಯರು ಪುರುಷರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ. ಆದರೆ ನಮ್ಮ ಸಮಾಜದ ಕೆಲವು ಭಾಗಗಳಲ್ಲಿ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸಲಾಗುತ್ತಿದೆ. ನಮ್ಮ ದೇಶ ಎಷ್ಟೇ ಮುಂದುವರಿದಿದ್ದರೂ, ವಿವಿಧ ಕ್ಷೇತ್ರಗಳಲ್ಲಿ ಎಷ್ಟೇ ಪ್ರಗತಿ ಸಾಧಿಸಿದ್ದರೂ ಮಹಿಳೆಯರ ಸ್ಥಿತಿಗತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೆಲವು ಮಹಿಳೆಯರು ರಾಜಕೀಯ, ಹಣಕಾಸು, ಕ್ರೀಡೆ, ಸಾಹಿತ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸಿದ್ದರೂ ಅವರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ. ಇನ್ನುಳಿದಂತೆ ಹೆಣ್ಣಿನ ಸ್ಥಾನಮಾನ ಆರಕ್ಕೇರಿಲ್ಲ, ಮೂರಕ್ಕೆ ಇಳಿದಿಲ್ಲ. ಆಕೆಯ ಮೇಲೆ ದಿನನಿತ್ಯದ ದೌರ್ಜನ್ಯಗಳು ಪ್ರಸ್ತುತ ನಮ್ಮ ಕಣ್ಣ ಮುಂದೆ ಇವೆ. ಈ ಆಧುನಿಕ ಸರ್ಕಾರದಲ್ಲಿ, ಮಹಿಳೆಯರ ಸ್ಥಾನಮಾನವನ್ನು ಖಚಿತಪಡಿಸಿಕೊಳ್ಳಲು ಅನೇಕ ಯೋಜನೆಗಳನ್ನು ಪ್ರಾರಂಭಿಸಲಾಗಿದೆ, ಅವರು ಎಲ್ಲಾ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಪಡೆಯುತ್ತಾರೆ. ಈ ಮೂಲಕ ಅವರಿಗೆ ಸಮಾಜದಲ್ಲಿ ಗೌರವ ಸಿಗುವಂತೆ ಮಾಡಲಾಗುತ್ತಿದೆ. ರಾಷ್ಟ್ರೀಯ ಮಹಿಳಾ ದಿನಾಚರಣೆಯು ಈ ಪ್ರಯತ್ನಗಳ ಒಂದು ಭಾಗವಾಗಿದೆ. ಭಾರತದಲ್ಲಿ ಫೆಬ್ರವರಿ 13 ಅನ್ನು ರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ.

 

 

ಫೆಬ್ರವರಿ 13 ರಂದು ರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲು ಒಂದು ಕಾರಣವಿದೆ. ಇದು ಭಾರತದ ಮೊದಲ ಮಹಿಳಾ ಗವರ್ನರ್ ಸರೋಜಿನಿ ನಾಯ್ಡು ಅವರ ಜನ್ಮದಿನವೂ ಆಗಿದೆ. ಅವರು 13 ಫೆಬ್ರವರಿ 1879 ರಂದು ಜನಿಸಿದರು ಮತ್ತು 2 ಮಾರ್ಚ್ 1949 ರಂದು ನಿಧನರಾದರು. ಭಾರತದಲ್ಲಿ ಮಹಿಳೆಯರ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ, ಅವರ ಜನ್ಮ ದಿನವನ್ನು ರಾಷ್ಟ್ರೀಯ ಮಹಿಳಾ ದಿನವಾಗಿ ಆಚರಿಸಲಾಗುತ್ತದೆ. ಭಾರತೀಯ ಮಹಿಳಾ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಮ್ಮೇಳನ ಮೊಟ್ಟಮೊದಲ ಬಾರಿಗೆ ಇಂತಹ ದಿನವನ್ನು ಆಚರಿಸಿತು.

Leave a comment

Your email address will not be published. Required fields are marked *